ಚಿರತೆ ದಾಳಿ ಆತಂಕದ ನಡುವೆಯೇ ಮಲೆ ಮಹದೇಶ್ವರ ಬೆಟ್ಟದಲ್ಲಿನ ಮಹಾಶಿವರಾತ್ರಿ ಜಾತ್ರೆಗೆ ಸಾವಿರಾರು ಭಕ್ತರು ಪಾದಯಾತ್ರೆ ಹೊರಟಿದ್ದಾರೆ. ಈ ಹಿನ್ನೆಲೆ ಅರಣ್ಯ ಇಲಾಖೆ ಹಾಗೂ ಪೊಲೀಸರಿಂದ ಭದ್ರತೆ ಹೆಚ್ಚಿಸಲಾಗಿದೆ. ಪಾದಯಾತ್ರೆಗೆ ಸಮಯ ನಿಗದಿಪಡಿಸಲಾಗಿದ್ದು, ಫೆಬ್ರವರಿ 13ರಿಂದ 18ರವರೆಗೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಭಕ್ತರು ಕಾವೇರಿ ನದಿ ದಾಟಲು ಅಧಿಕಾರಿಗಳು ನೆರವಾಗುತ್ತಿದ್ದಾರೆ.