ಚಿಕ್ಕಮಗಳೂರು ತಾಲೂಕಿನ ಕಣತಿ, ಐದಳ್ಳಿ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಲೆನಾಡಿಗರಲ್ಲಿ ಆತಂಕ ಹೆಚ್ಚಿಸಿದೆ. ಕಣತಿ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಒಂದು ಕಡೆ ಆನೆ ಸೆರೆ ಕಾರ್ಯಾಚರಣೆ ನಡೆಯುತ್ತಿದ್ದರೂ, ಮತ್ತೊಂದೆಡೆ ಸಲಗ ಬಿಂದಾಸ್ ಆಗಿ ಸಂಚರಿಸುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆ ಭೀತಿ ನಿರಂತರವಾಗಿದ್ದು, ಸುರಕ್ಷತಾ ಕ್ರಮಗಳ ಅವಶ್ಯಕತೆಯಿದೆ.