ವರ್ಷಾಂತ್ಯದ ರಜೆ ಮತ್ತು ಧನುರ್ಮಾಸದ ಹಿನ್ನೆಲೆಯಲ್ಲಿ ಮಂಡ್ಯದ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಮಕ್ಕಳು ಪಕ್ಷಿ ವೀಕ್ಷಣೆ ಹಾಗೂ ದೋಣಿ ವಿಹಾರದಲ್ಲಿ ಮುಳುಗಿದ್ದಾರೆ. ಇತ್ತ, ಶ್ರೀರಂಗಪಟ್ಟಣದ ನಿಮಿಷಾಂಭ ದೇಗುಲದಲ್ಲಿ ಭಕ್ತರು ಕಾವೇರಿ ನದಿಯಲ್ಲಿ ಮಿಂದೆದ್ದು ಪೂಜೆ ಸಲ್ಲಿಸುತ್ತಿದ್ದಾರೆ. ಮಂಡ್ಯ ಮೈಸೂರು ಸುತ್ತಮುತ್ತಲಿನ ಈ ಪ್ರದೇಶಗಳಲ್ಲಿ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ.