ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ವಾರಾಂತ್ಯದಲ್ಲಿ ವಸತಿ ಕೊಠಡಿಗಳ ಕೊರತೆ ಎದುರಾಗಿದೆ. ಮಠದ ಸುಮಾರು 3 ಸಾವಿರಕ್ಕೂ ಅಧಿಕ ರೂಂಗಳು ನಿತ್ಯ ಸಂಪೂರ್ಣ ಭರ್ತಿಯಾಗಿದ್ದು, ಆನ್ಲೈನ್ ಮತ್ತು ಆಫ್ಲೈನ್ ಬುಕ್ಕಿಂಗ್ ವ್ಯವಸ್ಥೆ ಇದ್ದರೂ ಭಕ್ತರು ರೂಂ ಸಿಗದೆ ಪರದಾಡುತ್ತಿದ್ದಾರೆ.