ಹೊಸನಗರದ ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಮದುವೆ ಆಮಂತ್ರಣ ನೀಡಿ ವಾಪಸ್ ಬರುತ್ತಿದ್ದ ಮಾರುತಿ ಓಮಿನಿ ಕಾರು ವೈರ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿಗಾಹುತಿಯಾಗಿದೆ. ದ್ಯಾಮ್ಲಾಪುರದ ಶ್ರೀಕಾಂತ್ ಅವರಿಗೆ ಸೇರಿದ ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ವಿಫಲವಾಯಿತು. ಈ ಕುರಿತು ರಿಪ್ಪನ್ಪೇಟೆ ಪೊಲೀಸರು ಪರಿಶೀಲಿಸಿದ್ದಾರೆ.