ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹೊಸ ಟ್ರಾವೆಲ್ ಶೋ ‘ದಾದಾ ಆನ್ ಹಾಲಿಡೇ’ ಲಾಂಚ್ ಕಾರ್ಯಕ್ರಮವು ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಅದ್ಧೂರಿಯಾಗಿ ನಡೆದಿದೆ. ತಮ್ಮ ನೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ಆಗಮಿಸಿದ್ದು, ಮಾಲ್‌ನಲ್ಲಿ ಜನಸಾಗರವೇ ನೆರೆದಿತ್ತು. ಕಿಚ್ಚನ ಈ ಕ್ರೇಜ್ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.