ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಈ ಭೀಕರ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಅಧಿಕೃತ ಮಾಧ್ಯಮಗಳು ಖಚಿತಪಡಿಸಿವೆ. ಬೆಟ್ಟದಿಂದ ಉರುಳಿಬಂದ ಭಾರಿ ಪ್ರಮಾಣದ ಕಲ್ಲು ಮತ್ತು ಮಣ್ಣು ನೇರವಾಗಿ ಜನವಸತಿ ಪ್ರದೇಶದ ಮೇಲೆ ಬಿದ್ದಿದೆ.