ಸಚಿವ ಡಿ. ಸುಧಾಕರ್ ಅವರ ಅನಾರೋಗ್ಯದ ನಡುವೆಯೂ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಎಂದು ಸುಧಾಕರ್ ಅವರ ಪುತ್ರ ಸುಹಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಮಾರ್ಚ್ 26ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಡಿ. ಸುಧಾಕರ್ ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ರಾಜಕೀಯ ಜಿದ್ದಾಜಿದ್ದಿಗಾಗಿ ತಮ್ಮ ತಂದೆಯ ಆರೋಗ್ಯವನ್ನು ಬಳಸಿಕೊಂಡಿರುವುದು ಕುಟುಂಬಕ್ಕೆ ನೋವುಂಟು ಮಾಡಿದೆ ಎಂದು ಸುಹಾಸ್ ತಿಳಿಸಿದ್ದಾರೆ.