ಸದಾಶಿವ ನಗರದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಸಚಿವ ಪ್ರಿಯಾಂಕ್ ಖರ್ಗೆ ತಕ್ಷಣ ಸ್ಪಂದಿಸಿದರು. ರಸ್ತೆ ಬದಿಯಲ್ಲಿ ಬಿದ್ದಿದ್ದ ಗಾಯಾಳುವನ್ನು ಗಮನಿಸಿದ ಸಚಿವರು ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಮ್ಮ ವಾಹನದಲ್ಲಿ ರಾಮಯ್ಯ ಆಸ್ಪತ್ರೆಗೆ ಸಾಗಿಸಲು ನೆರವಾದರು. ಇದು ಅವರ ಕರ್ತವ್ಯ ಪ್ರಜ್ಞೆಯನ್ನು ಎತ್ತಿ ಹಿಡಿಯುತ್ತದೆ.