ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಶಾಸಕರು ಸಂಪುಟ ಪುನಾರಚನೆಗಾಗಿ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ. ಮೂರು ವರ್ಷಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೇವೆ, 15 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಉಗ್ರ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ನಮ್ಮ ಕೈಯಲ್ಲಿಲ್ಲ, ಆದರೆ ಹಕ್ಕುಗಳನ್ನು ಕೇಳುತ್ತೇವೆ ಎಂದಿದ್ದಾರೆ.