ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವ ಮೆರವಣಿಗೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರು ಡೋಲು ಬಾರಿಸುತ್ತಾ ಭರ್ಜರಿ ನೃತ್ಯ ಪ್ರದರ್ಶಿಸಿದರು. ಬಿ.ಎಚ್. ರಸ್ತೆಯಲ್ಲಿ ನಡೆದ ವಿವಿಧ ಕಲಾ ತಂಡಗಳ ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಶಾಸಕರ ನೃತ್ಯಕ್ಕೆ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಸ್ಥಳೀಯರಲ್ಲಿ ಹರ್ಷವನ್ನುಂಟು ಮಾಡಿತು.