ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಖಾನಾಪುರ ತಾಲೂಕಿನ ಬಟವಾಡೆ ಫಾಲ್ಸ್ ಧುಮ್ಮಿಕ್ಕಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಎಲ್ಲಾ ಜಲಪಾತಗಳ ಪ್ರವೇಶಕ್ಕೆ ಅರಣ್ಯ ಇಲಾಖೆ ನಿರ್ಬಂಧ ಹೇರಿದೆ. ಇದರಿಂದಾಗಿ ಮಳೆಗಾಲದ ಸೌಂದರ್ಯದಿಂದ ಕಂಗೊಳಿಸುತ್ತಿರುವ ಬಟವಾಡೆ ಫಾಲ್ಸ್ ಪ್ರವಾಸಿಗರಿಲ್ಲದೆ ಬಣಗುಟ್ಟುತ್ತಿದೆ. ಈ ನಿರ್ಬಂಧಗಳ ಹೊರತಾಗಿಯೂ, ಜಲಪಾತದ ಭವ್ಯತೆ ನೋಡಲು ಕೆಲವರು ಯತ್ನಿಸಿದ್ದಾರೆ ಎನ್ನಲಾಗಿದೆ.