ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ ತಮನ್ನಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಸಂಸದ ಡಾ.ಕೆ ಸುಧಾಕರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ನಟಿಯರಾದ ರಮ್ಯಾ, ರಚಿತಾ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ದೆ, ರುಕ್ಷಿಣಿ ವಸಂತ್ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ನೇಮಕಾತಿ ಕುರಿತು ಕನ್ನಡಿಗರು ಕಾಂಗ್ರೆಸ್ ಪಕ್ಷವನ್ನು ಕ್ಷಮಿಸುವುದಿಲ್ಲ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.