ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ದೇವನಗೂಲ್ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡು ಕಾಫಿ, ಮೆಣಸು, ಬಾಳೆ ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ಸ್ಥಳೀಯ ನಿವಾಸಿಗಳು ಮತ್ತು ರೈತರು ಆತಂಕಗೊಂಡಿದ್ದಾರೆ. ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಸಮಸ್ಯೆ ಪರಿಹಾರಕ್ಕೆ ತುರ್ತು ಕ್ರಮ ಅನಿವಾರ್ಯವಾಗಿದೆ.