ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮೂರಿನ ಕಟ್ಟೆ ಮರು ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಭಟ್ಕಳ ನಗರ ಹಾಗೂ ಜಾಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದ್ದು, ಭಟ್ಕಳ ಉಪವಿಭಾಗಾಧಿಕಾರಿ ಮಹೇಶ್ ಅವರು ಈ ಆದೇಶ ಹೊರಡಿಸಿದ್ದಾರೆ.