ಕಳೆದ ಎರಡು ದಿನಗಳಿಂದ ಬೆಂಗಳೂರು ಸುತ್ತಮುತ್ತ ಭಾರಿ ಮಳೆಯಾದ ಕಾರಣ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಮುತ್ಯಾಲಮಡು ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ನೂರಾರು ಅಡಿ ಮೇಲಿಂದ ಧುಮ್ಮಿಕ್ಕುವ ಜಲಪಾತ ವೀಕ್ಷಿಸಲು ಪ್ರವಾಸಿತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.