ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ CWRC ಶಿಫಾರಸು ವಿರೋಧಿಸಿ ಮೈಸೂರಿನಲ್ಲಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರು ಪಾಲಿಕೆ ಮುಂಭಾಗ ರಸ್ತೆಗೆ ಅಡ್ಡಲಾಗಿ ಮಲಗಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ನ್ಯಾಯ ಬೇಕು ಎಂದು ಒತ್ತಾಯಿಸಿದರು. ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.