ಮೈಸೂರಿನ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮಕ್ಕೆ ಕಾಡಿನಿಂದ ಮೂರು ಆನೆಗಳು ಪ್ರವೇಶಿಸಿ ಆತಂಕ ಸೃಷ್ಟಿಸಿದವು. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರ ಸಹಕಾರದೊಂದಿಗೆ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಿದರು. ಕಾಡು ಪ್ರಾಣಿಗಳು ನಾಡಿಗೆ ಬರದಂತೆ ತಡೆಯಲು ಶಾಶ್ವತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.