ಮೈಸೂರಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರೊಬ್ಬರು ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಪ್ರಶ್ನಿಸಿದ ಸಿ.ಎಂ.ಗೋಪಾಲ್ ಮತ್ತು ಅವರ ಪುತ್ರ ಅಭಿಷೇಕ್ ಅವರಿಗೆ ಚಾಕು ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಿ.ಎಂ.ಗೋಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕೃತ್ಯ ಎಸಗಿದ ಶಿಕ್ಷಕ ಸಿ.ಎನ್.ಮಂಜುನಾಥ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.