ಮೈಸೂರು ನಗರ ಸಂಚಾರಿ ಪೊಲೀಸರು ಕರ್ಕಶ ಶಬ್ದ ಮಾಡುವ ದೋಷಪೂರಿತ ಬೈಕ್ ಸೈಲೆನ್ಸರ್ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ 378 ದ್ವಿಚಕ್ರ ವಾಹನಗಳ ಸೈಲೆನ್ಸರ್ಗಳನ್ನು ವಶಪಡಿಸಿಕೊಂಡು, ಅವುಗಳ ಮೇಲೆ ರೋಡ್ ರೋಲರ್ ಹತ್ತಿಸುವ ಮೂಲಕ ನಾಶಪಡಿಸಲಾಯಿತು. ಶಬ್ದ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.