ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮದಿಂದ ನೆರವೇರಿತು. ಮುಂಜಾನೆಯಿಂದ ಅಭಿಷೇಕ, ವಿಶೇಷ ಪೂಜೆ ಮಾಡಲಾಯಿತು. ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಸೇವೆ ಸಲ್ಲಿಸಿದರು. ಭಕ್ತರಿಗೆ ಘಾಟಿ ಸುಬ್ರಹ್ಮಣ್ಯ ಪ್ರಾಧಿಕಾರದಿಂದ ತೀರ್ಥ ಪ್ರಸಾದ ವ್ಯವಸ್ಥೆ ಮಾಡಲಾಯಿತು.