ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಅಪಘಾತದ ತೀವ್ರತೆಗೆ ಲಾರಿ ಚಾಲಕನ ಎರಡೂ ಕಾಲು ತುಂಡಾದ ದಾರುಣ ಘಟನೆ ಬುಧವಾರ ಮುಂಜಾನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಅರಿಶಿನಕುಂಟೆಯಲ್ಲಿ ಸಂಭವಿಸಿದೆ. ಅಪಘಾತದಿಂದ ಅರಿಶಿನಕುಂಟೆ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಕಿಲೋ ಮೀಟರ್ಗಟ್ಟಲೇ ಸಾಲುಗಟ್ಟಿ ನಿಲ್ಲುವಂತಾಯಿತು.