ನೇಪಾಳದಲ್ಲಿ ಸಂಭವಿಸಿದ ಜಲಪ್ರಳಯದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದೆ ಎಂದು ಎಎಫ್ಪಿ (AFP) ಸುದ್ದಿ ಸಂಸ್ಥೆ ವರದಿ ಮಾಡಿದೆ. ಟಿಬೆಟ್ ಗಡಿಗೆ ಹೊಂದಿಕೊಂಡಂತಿರುವ ಪ್ರದೇಶದ ಗ್ರಾಮಗಳು ಹಾಗೂ ಹಲವು ಯೋಜನೆಗಳ ನಿರ್ಮಾಣ ಸ್ಥಳಗಳು ಕೊಚ್ಚಿಹೋಗಿದ್ದು, ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 105 ಭಾರತೀಯರು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ತಿಳಿಸಿದೆ. ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ 14 ಹೆಲಿಕಾಪ್ಟರ್ಗಳು ಮತ್ತು ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ನೇಪಾಳ ಸೇನೆ ತಿಳಿಸಿದೆ. ಹೆಲಿಕಾಪ್ಟರ್ ಮೂಲಕ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡುತ್ತಿರುವ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ.