ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಎಐಸಿಸಿ ವೀಕ್ಷಕ ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜೂನ್ 3ರಂದು ಸಂಜೆ 4 ಗಂಟೆಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಕೆ.ಸಿ. ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.