ಕೈದಿಗಳಿಗೆ ರಾಜಾತಿಥ್ಯದಿಂದ ರಾಜ್ಯದಲ್ಲಿ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ಬಂದಿಖಾನೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ. ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ಅವರು ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ಅಧಿಕಾರಿಗಳನ್ನು ಈ ವೇಳೆ ಅವರು ತರಾಟೆಗೆ ಪಡೆದ ಪ್ರಸಂಗವೂ ನಡೆದಿದೆ.