ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಿ.ಕೆ. ಹರಿಪ್ರಸಾದ್ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಜಮೀರ್ ಅಹಮದ್ ಅವರ ನಿವಾಸಕ್ಕೆ ಭೇಟಿ ನೀಡಿದ ಹರಿಪ್ರಸಾದ್, ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದ ಬಿ.ಕೆ. ಹರಿಪ್ರಸಾದ್ ಅವರ ಈ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.