ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಹೂಡಿದ್ದರು. ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ. ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರು.