ಬೆಂಗಳೂರಿನ ಹೃದಯಭಾಗದಲ್ಲಿರುವ ಪ್ರಸಿದ್ಧ ಕಬ್ಬನ್ ಪಾರ್ಕ್ ಇತ್ತೀಚೆಗೆ ಅಹಿತಕರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಉತ್ತರ ಭಾರತದ ಕೆಲವು ಯುವತಿಯರು ಪರಸ್ಪರ ಜಗಳವಾಡಿಕೊಂಡಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಜಗಳವು ಸಾಮಾಜಿಕ ಮಾಧ್ಯಮದಲ್ಲಿ ರೀಲ್ಸ್ ತಯಾರಿಸುವ ವಿಚಾರಕ್ಕೆ ಸಂಬಂಧಿಸಿದೆ ಎಂದು ಹೇಳಲಾಗಿದೆ.