ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿಕಟ್ಟಬೇಕಿದ್ದ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿದರು. ದಾಖಲೆಗಳ ಪರಿಶೀಲನೆ ವೇಳೆ ಬಾಲಕಿಗೆ ಮದುವೆಗೆ ಇನ್ನೂ ನಾಲ್ಕು ತಿಂಗಳು ಬಾಕಿ ಇರುವುದು ದೃಢಪಟ್ಟಿದೆ.