ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾಗೌಡ ಸಹೋದರನ ವಿವಾಹದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕಾಮಾಕ್ಷಿಪಾಳ್ಯ ಪೊಲೀಸರಿಗೆ ನೋಟಿಸ್ ನೀಡಿದೆ. ಡಿಸೆಂಬರ್ 12 ಮತ್ತು 13ರಂದು ಮದುವೆ ನಿಗದಿಯಾಗಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಲಾಗಿದೆ.