ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಿಜೆಪಿ ಶಾಸಕ ಧೀರಜ್ ಮುನಿರಾಜು ಹಾಗೂ ಕಾರ್ಯಕರ್ತರಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಪೂಜೆ ನಂತರ ದೇಗುಲ ಮುಂಭಾಗ 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.