ಆದಿಚುಂಚನಗಿರಿ ಮಠದಲ್ಲಿ ನಡೆದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ವೇದಿಕೆಯಲ್ಲಿ ಹೆಚ್.ಡಿ. ದೇವೇಗೌಡರನ್ನು ಆತ್ಮೀಯವಾಗಿ ಭೇಟಿಯಾದರು. ಕೈಹಿಡಿದು ಮಾತಾಡಿಸಿದ ಮೋದಿ, ಗೌರವಯುತ ಭೇಟಿಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಹೆಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಚಲುವರಾಯಸ್ವಾಮಿ, ಮತ್ತು ಆರ್. ಅಶೋಕ್ ಉಪಸ್ಥಿತರಿದ್ದರು.