ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿದರು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುತ್ತಾ, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ನಾವು ಮುನ್ನಡೆಯೋಣ ಎಂದು ಮೋದಿ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಕೆಂಪು ಕೋಟೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಲಾಯಿತು.