ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಈ ಸಂಬಂಧ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿ ಕಮಲಾಕರ್ ಭಟ್, ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ಕೇಪ್ ನಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.