ಚಿಕ್ಕಮಗಳೂರಿನಲ್ಲಿ ಬಿಜೆಪಿ MLC ಸಿ.ಟಿ.ರವಿ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮುಲ್ಲಾ ಅವರ ಹೇಳಿಕೆಗೆ ಮುಸ್ಲಿಂ ಸಮುದಾಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ.ರವಿ ನಿವಾಸಕ್ಕೆ ಡಿಎಆರ್ ಮತ್ತು ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಭದ್ರತೆಯನ್ನು ಹೆಚ್ಚಿಸಲಾಗಿದೆ.