ಪ್ರಧಾನಿ ನಿವಾಸದ ಮುಂಭಾಗ ಧರಣಿ ನಡೆಸಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ. ಪ್ರತಿಭಟನಾ ಸ್ಥಳದಿಂದ ವಶಕ್ಕೆ ಪಡೆಯಲಾದ ನಾಯಕರನ್ನು ದೆಹಲಿಯ ವಿಭಿನ್ನ ಸ್ಥಳಗಳಿಗೆ ಕರೆದೊಯ್ಯಲಾಗಿತ್ತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ದು ಕಸ್ಟಡಿಯಲ್ಲಿಡಲಾಗಿತ್ತು. ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಕ್ರೀಡಾಂಗಣದ ಹೊರಗೆ ಸೇರಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.