ಚಿಕ್ಕಬಳ್ಳಾಪುರ ರಾಜಕೀಯದಲ್ಲಿ ಪರಸ್ಪರ ಬದ್ಧ ವೈರಿಗಳೆಂದು ಗುರುತಿಸಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಸಹಾಯಕ ಉಪಕರಣಗಳ ವಿತರಣೆ ಸಮಾರಂಭದಲ್ಲಿ ಇಬ್ಬರೂ ನಾಯಕರು ಒಟ್ಟಿಗೆ ಕಾಣಿಸಿಕೊಂಡರು. ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆದಿದೆ.