ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿ ಸರಣಿ ಮನೆ ಕಳ್ಳತನ ನಡೆದಿದೆ. ಬೀಗ ಹಾಕಿದ್ದ ನಾಲ್ಕು ಮನೆಗಳನ್ನು ಗುರಿಯಾಗಿಸಿ ಖತರ್ನಾಕ್ ಕಳ್ಳರು ಆರು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾರೆ. ಡಿವೈಎಸ್ಪಿ, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.