ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು (ಜುಲೈ 20) ನೆರವೇರುತ್ತಿದೆ. ಅವರ ಮೊಮ್ಮಗ, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅಜ್ಜಿಯ ಅಂತಿಮ ದರ್ಶನ, ಅಂತ್ಯಸಂಸ್ಕಾರ ವೀಕ್ಷಿಸಲು ತೆರಳುವುದಕ್ಕಾಗಿ ಪೆರೋಲ್ಗೆ ಅರ್ಜಿ ಸಲ್ಲಿಸಿಲ್ಲ. ಜೈಲು ಅಧಿಕಾರಿಗಳಿಗೆ ಪ್ರಜ್ವಲ್ ರೇವಣ್ಣ ಮನವಿ ಮಾಡಿದರೆ ಜೈಲಿನಿಂದಲೇ ಅಜ್ಜಿ ಚೆನ್ನಮ್ಮ ಅಂತ್ಯಸಂಸ್ಕಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಜೈಲಿನ ಮುಖ್ಯ ಅಧೀಕ್ಷಕ ಅನ್ಯುಕುಮಾರ್ ಮಾಹಿತಿ ನೀಡಿದ್ದಾರೆ.