ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕ ಹೆಚ್.ಡಿ. ರೇವಣ್ಣ ಅವರು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರಸಾದ ವಿತರಣೆಗೆ ಹಾಗೂ ಭದ್ರತೆಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ.