ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಕ್ರಾಸ್ ಬಳಿ ಕೊಲ್ಲೂರು-ಸಿಗಂದೂರು ಮಾರ್ಗದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮನೆ ಮೇಲೆ ಪಲ್ಟಿಯಾಗಿದೆ. ಕಾಗಲ್-ಹಲೇಕಟ್ಟಿಗೆ ತಿರುವಿನಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ದಾವಣಗೆರೆ ಮೂಲದ ಗಾರ್ಮೆಂಟ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತುಮರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.