ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿಗೂಢವಾಗಿ ಕಾಣೆಯಾಗಿರುವ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, 2 ದಿನಗಳ ಹಿಂದೆಯೇ ಮಾಹಿತಿ ಬಂದಿತ್ತು. ಇಂದು ಮಾಧ್ಯಮಗಳಲ್ಲಿಯೂ ಬಂದಿದೆ. ಅವರ ಕುಟುಂಬದವರು ಈವರೆಗೆ ದೂರು ನೀಡಿಲ್ಲ. ನಮಗೆ ಬಂದ ಮಾಹಿತಿ ಪ್ರಕಾರ, ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾಣೆಯಾಗಿರುವುದಾಗಿ ಗೊತ್ತಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದರು.