ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ‘ಇಂಡಿಯಾ’ ಮೈತ್ರಿಕೂಟ ನಡೆಸುತ್ತಿದ್ದ ಹೋರಾಟ ತೀವ್ರಗೊಂಡಿದ್ದು, ನಾಯಕರು ಧರಣಿ ನಡೆಸುತ್ತಿದ್ದ ಆಕಾಶವಾಣಿ ಭವನದ ಪ್ರತಿಭಟನಾ ಸ್ಥಳವನ್ನು ದೆಹಲಿ ಪೊಲೀಸರು ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.