ನಟ, ನಿರ್ದೇಶಕ ಉಪೇಂದ್ರ ಅವರ ಮನೆಯಲ್ಲಿ ಬಹುತೇಕ ಎಲ್ಲ ಹಬ್ಬಗಳನ್ನು ಸಡಗರದಿಂದ ಆಚರಿಸಲಾಗುತ್ತದೆ. ಈ ವರ್ಷ ಗೌರಿ-ಗಣೇಶ ಹಬ್ಬವನ್ನು ಸಹ ಅವರು ತುಂಬ ಚೆನ್ನಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ಪ್ರಿಯಾಂಕಾ ಹಾಗೂ ಕುಟುಂಬದ ಎಲ್ಲ ಸದಸ್ಯರು ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಒಟ್ಟಾರೆ ಹಬ್ಬ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಿಯಾಂಕಾ ಉಪೇಂದ್ರ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.