ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು ಪ್ರಕರಣ ಸಂಬಂಧ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಸೆಪ್ಟೆಂಬರ್ 16ರಂದು ಹೈಕೋರ್ಟ್ ಕ್ರಾಸ್ ಬಳಿ ಸ್ಥಾಪಿಸಿದ್ದ ಪ್ರತಿಮೆಯನ್ನು ಸೆಪ್ಟೆಂಬರ್ 17ರಂದು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದೀಗ ಕರ್ನಾಟಕ ಪ್ರದೇಶ ಕುರುಬರ ಸಂಘವು ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರು ಸ್ಥಾಪಿಸುವಂತೆ ಆಗ್ರಹಿಸಿ ಡಿಸಿ ಕಚೇರಿವರೆಗೆ ರ್ಯಾಲಿ ನಡೆಸಿದೆ.