ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ರೂಪ ಅವರ ಮಗ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾನೆ. ಸುಜಯ್ (21) ಮೃತ ದುರ್ದೈವಿ. ತಾಯಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾಗಲೇ ಅಪಘಾತದಲ್ಲಿ ಮಗ ಸಾವನ್ನಪ್ಪಿದ್ದಾನೆ. ಬುಧವಾರ (ನ.25) ಸಂಜೆ ಲಕ್ಷ್ಮೀಪುರ ಬಳಿ ಬೈಕ್ ಅಪಘಾತದಲ್ಲಿ ಸುಜಯ್ ಮೃತಪಟ್ಟಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ರೂಪ ಅವರು ಆಲೂರಿಗೆ ವಾಪಾಸ್ ಆಗಿದ್ದಾರೆ.