ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ (17) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಪರೀಕ್ಷೆಗೆ ಹೊರಡಲು ಸಿದ್ಧವಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸ್ನಾನ ಮುಗಿಸಿ ಹೊರಬರುತ್ತಿದ್ದಾಗ ಕುಸಿದು ಬಿದ್ದ ಭೂಮಿಕಾಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.