ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಲದಕ್ಕೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದಲೇ ಪೊಲೀಸ್ ಠಾಣೆವರೆಗೂ ಮೆರವಣಿಗೆ ಮಾಡಿಕೊಂಡು ಬಂದಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.