ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಾಲಗುಂದ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳ ಕೊರತೆ ತೀವ್ರವಾಗಿದೆ. ಸುಮಾರು 2 ಸಾವಿರಕ್ಕೂ ಹೆಚ್ಚು ಜನ ರಾತ್ರಿ 11 ಗಂಟೆಯಿಂದಲೇ ಸಿಲಿಂಡರ್ಗಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಸಮಸ್ಯೆ ಕಾರಣ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯೂ ತೆರೆಯದಿದ್ದು, ಜನ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.