ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಸಮಾಧಾನವಿದೆ ಎಂದು ರಾಜೇಂದ್ರ ರಾಜಣ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇದೇ ಕಾರಣಕ್ಕೆ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರಾಗಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನದ ನಿರೀಕ್ಷೆ ಹುಸಿಯಾದ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.